ನವದೆಹಲಿ, ಫೆ.17 (DaijiworldNrews/HR): ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದ್ದು, ಇದೀಗ ಸತತ ಒಂಬತ್ತನೇ ದಿನವೂ ಏರಿಕೆಯಾಗಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಪ್ರತಿ ಲೀಟರ್ಗೆ 25 ಪೈಸೆ ಹೆಚ್ಚಳವಾಗಿದೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 89.54 ಕ್ಕೆ ತಲುಪಿದ್ದು, ಡೀಸೆಲ್ ದರ 79.95 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ 95.46 ಹಾಗೂ ಡೀಸೆಲ್ 86.34 ರಷ್ಟಿದೆ ಎನ್ನಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ 92.28 ಆಗಿದ್ದು, ಡೀಸೆಲ್ ದರ ಪ್ರತಿ ಲೀಟರ್ಗೆ 84.49 ಆಗಿದೆ.
ಒಂಬತ್ತು ದಿನದಿಂದ ತೈಲ ದರ ಹೆಚ್ಚಾಗುತ್ತಿರುವುದರಿಂದ ಸರಕು ಸಾಗಣೆ ವೆಚ್ಚ ಏರಿಕೆಯಾಗಲಿದ್ದು, ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿವೆ ಎನ್ನಲಾಗಿದೆ.