ನವದೆಹಲಿ, ಫೆ.17 (DaijiworldNrews/HR): ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.
ನ್ಯಾಯಾಂಗದ ಕುರಿತು ರಾಜ್ದೀಪ್ ಮಾಡಿದ ಟ್ವೀಟ್ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ ಎಂದು ಮಂಗಳವಾರ ಮಾಧ್ಯಮಗಳು ವರದಿ ಮಾಡಿಲಾಗಿತ್ತು ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆಯೂ ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಮಾಹಿತಿ ಪ್ರಕಟವಾಗಿತ್ತು.
ಇನ್ನು ಈ ಕುರಿತು ಸ್ಪಷ್ಟನೆ ನೀಡಿರುವ ಸುಪ್ರೀಂ ಕೋರ್ಟ್ "ರಾಜ್ದೀಪ್ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿರುವಂತೆ ಕೋರ್ಟ್ ವೆಬ್ಸೈಟ್ನಲ್ಲಿ ತಪ್ಪಾಗಿ ತೋರಿಸಿದ್ದು, ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ದೂರು ದಾಖಲಿಸಿಲ್ಲ" ಎಂದು ಹೇಳಿದೆ.