ನವದೆಹಲಿ, ಫೆ.17 (DaijiworldNrews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಯಲ್ಲಿ ದೆಹಲಿ ಪೊಲೀಸ್ ಸ್ಟೇಷನ್ ಹೌಸ್ ಆಫೀಸರ್(ಎಸ್ಎಚ್ಒ) ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾಗಿದ್ದ ವ್ಯಕ್ತಿಯೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದ್ದು, ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಆರೋಪಿಯು ಪ್ರತಿಭಟನಾ ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರಿಂದ ಕಾರಿನ ಕೀಲಿಯನ್ನು ಕಿತ್ತುಕೊಂಡು ಕಾರಿನಲ್ಲಿ ಪರಾರಿಯಾಗುತ್ತಿದ್ದ. ಈತನನ್ನು ಪೊಲೀಸರು ಅಟ್ಟಿಸಿಕೊಂಡು ಹೋಗಿದ್ದು, ಆರೋಪಿ ಕಾರು ಬಿಟ್ಟು ದ್ವಿಚಕ್ರ ವಾಹನ ಏರಿ ಪರಾರಿಯಾದ. ಈ ಆರೋಪಿಯನ್ನು ಹಿಂಬಾಲಿಸಿದ ಪೊಲೀಸರು ಮುಕಾರ್ಬ್ ಚೌಕಾ ಬಳಿ ಬಂಧಿಸಿದ್ದಾರೆ.