ಚಾಮರಾಜನಗರ, ಫೆ.17 (DaijiworldNrews/HR): "ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಗೋ ಮಾಂಸ ತಿನ್ನುವಂತೆ ನಾನು ಸವಾಲು ಹಾಕಿಲ್ಲ" ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಅವರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದರು. ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈಗ ವಿರೋಧಪಕ್ಷ ನಾಯಕರಾಗಿದ್ದಾರೆ. ಅವರ ಹೇಳಿಕೆ ಸರಿಯಿಲ್ಲ ಎಂದಷ್ಟೇ ನಾನು ಹೇಳಿದ್ದೇನೆ" ಎಂದು ಪಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಇನ್ನು ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಸಿದ್ದರಾಮಯ್ಯ ಹೀಗೆ ಹೇಳುತ್ತಿದ್ದಾರೆ. ಆದರೆ ಅವರ ಮಗ ದೇಣಿಗೆ ಕೊಟ್ಟಿದ್ದಾರೆ. ಅವರ ತಮ್ಮನ ಮಗ ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.