ಬೆಂಗಳೂರು, ಫೆ. 18 (DaijiworldNews/SM): 2021-22ನೇ ಸಾಲಿನ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆದಿದ್ದು, ಮಾರ್ಚ್ 8ರಂದು ರಾಜ್ಯ ಬಜೆಟ್ ನ್ನು ಸಿಎಂ ಯಡಿಯೂರಪ್ಪ ಮಂಡನೆಮಾಡಲಿದ್ದಾರೆ.
ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾರ್ಚ್ 8 ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಇಂದು ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ ದಿನಾಂಕ ನಿಗದಪಡಿಸಲಾಗಿದ್ದು, ಮಾರ್ಚ್ 8 ರಂದು 2021-22ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದರು.