ಬೆಂಗಳೂರು, ಫೆ.19 (DaijiworldNews/MB) : ಕೇರಳದ ಬ್ಯೂಟಿ ಪಾರ್ಲರ್ ಒಂದರಲ್ಲಿ ಮಹಿಳೆಯೊಬ್ಬರ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ರವಿ ಪೂಜಾರಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಔಪಚಾರಿಕವಾಗಿ ಬಂಧಿಸಿ ವಿಚಾರಣೆ ನಡೆಸಲು ಎರ್ನಾಕುಲಂನ ಸಿಸಿಬಿ ಪೊಲೀಸರಿಗೆ ನಗರದ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ.
ಕೇರಳದ ಎರ್ನಾಕುಲಂನ ಸಿಸಿಬಿ ವಿಭಾಗದ ಪೊಲೀಸರು ರವಿ ಪೂಜಾರಿಯನ್ನು ವಶಕ್ಕೆ ಪಡೆಯಲು ಅನುಮತಿ ನೀಡಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನಗರದ 65ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೈಲಿನಲ್ಲೇ ವಿಚಾರಣೆ ನಡೆಸಲು ಎರ್ನಾಕುಲಂನ ಸಿಸಿಬಿ ಪೊಲೀಸರಿಗೆ ಅನುಮತಿ ನೀಡಿದೆ.
ಎರ್ನಾಕುಲಂನ ಸಿಸಿಬಿ ಪೊಲೀಸರು ಐದು ದಿನಗಳ ಕಾಲ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರವಿಪೂಜಾರಿಯನ್ನು ಔಪಚಾರಿಕವಾಗಿ ಬಂಧಿಸಿ ವಿಚಾರಣೆಗೆ ಒಳಪಡಿಸಲಿದ್ದಾರೆ.