ನವದೆಹಲಿ, ಫೆ.19 (DaijiworldNews/HR): ಉಪ ಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ತೆರವಾಗಿರುವ ರಾಜ್ಯ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಮಾರ್ಚ್ 15ರಂದು ಮತದಾನ ನಿಗದಿಪಡಿಸಿ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.
ಈ ಸಂಬಂಧ ಫೆಬ್ರವರಿ 25ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನವಾಗಿದ್ದು, ಮಾರ್ಚ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಹಿಂದಕ್ಕೆ ಪಡೆಯಲು ಮಾರ್ಚ್ 8 ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.
ಇನ್ನು ಮಾರ್ಚ್ 15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ.
ಡಿಸೆಂಬರ್ 28ರಂದು ಉಪ ಸಭಾಪತಿಯಾಗಿದ್ದ ಜೆಡಿಎಸ್ನ ಎಸ್.ಎಲ್. ಧರ್ಮೇಗೌಡ ಅವರು ಕಡೂರು ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದರು.