ಶ್ರೀನಗರ, ಫೆ.19 (DaijiworldNews/PY): ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ದಾಳಿಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಸಾಂದರ್ಭಿಕ ಚಿತ್ರ
ಭಾರತೀಯ ಸೇನಾ ಪಡೆಯು ಶೋಪಿಯಾನ್ನಲ್ಲಿ ಎನ್ಕೌಂಟರ್ ನಡೆಸಿದ್ದು, ಅಡಗಿ ಕುಳಿತಿದ್ದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡು ಸೇರಿದಂತೆ ಸ್ಪೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕರ ಗುರುತು ಇನ್ನು ಪತ್ತೆ ಹಚ್ಚಲಾಗಿಲ್ಲ.
ಉಗ್ರರು ಅಡಗಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ಸೇನೆ ಹಾಗೂ ಕಾಶ್ಮೀರ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದ ಸಂದರ್ಭ ಅಡಗಿ ಕುಳಿತ್ತಿದ್ದ ಉಗ್ರರು ಭಾರತೀಯ ಸೇನೆ ಹಾಗೂ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.
ಉಗ್ರರ ದಾಳಿಗೆ ಸೇನೆ ಹಾಗೂ ಪೊಲೀಸ್ ಸರಿಯಾದ ಪ್ರತ್ಯುತ್ತರ ನೀಡಿದೆ. ಗುಂಡಿನ ಚಕಮಕಿಯ ಸಂದರ್ಭ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಘಟನಾ ಸ್ಥಳದಲ್ಲಿ ಇನ್ನು ಕೆಲವು ಉಗ್ರರು ಅಡಗಿರುವ ಶಂಕೆ ಇದ್ದು ಕಾರ್ಯಾಚರಣೆ ಮುಂದುವರೆದಿದೆ.