ಬೆಂಗಳೂರು, ಫೆ. 20 (DaijiworldNews/HR): ಕೊರೊನಾ ಸೋಂಕು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿ, ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲು ಕ್ರಮಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಹಾಗೂ ಮುಖ್ಯಕಾರ್ಯದರ್ಶಿವರಿಗೆ ಡಿಸಿಎಂ ಗೋವಿಂದ ಕಾರಜೋಳ ಪತ್ರ ಬರೆದಿದ್ದಾರೆ.
"ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಹಲವು ತಾಲೂಕುಗಳು ನೆರೆ ರಾಜ್ಯಗಳಿಗೆ ಹೊಂದಿಕೊಂಡಿದದು, ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆ ರಾಜ್ಯಗಳಿಗೆ ಪ್ರತಿ ನಿತ್ಯ ಸಂಚರಿಸುತ್ತಿದ್ದಾರೆ. ಅಲ್ಲದೇ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು" ಎಂದು ಹೇಳಿದದಾರೆ.
ಇನ್ನು ಕರ್ನಾಟಕದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟು ತಪಾಸಣೆಗೊಳಪಡಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಆದೇಶಿಸುವಂತೆ ಡಿಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.