ಬೆಂಗಳೂರು, ಫೆ.20 (DaijiworldNews/MB) : ''ರಾಜ್ಯದಲ್ಲಿ ಜುಲೈ 7 ಹಾಗೂ 8ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ'' ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ರಾಜ್ಯದಲ್ಲಿ ಜುಲೈ 7 ಹಾಗೂ 8ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಜುಲೈ 7 ರಂದು ಜೀವವಿಜ್ಞಾನ, ಗಣಿತ, ಜುಲೈ 8 ರಂದು ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜುಲೈ 9ರಂದು ಕನ್ನಡ ಪತ್ರಿಕೆಯ ಪರೀಕ್ಷೆ ನಡೆಸಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.