ಚೆನ್ನೈ, ಫೆ.21 (DaijiworldNews/PY): "ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣದ ಜನರಿಗೆ ಅನುಕೂಲವಾಗುವಂತೆ ಗೋದಾವರಿ-ಕಾವೇರಿ ನದಿ ಸಂಪರ್ಕಿಸುವ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿ" ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಸಿಎಂಗಳೊಂದಿಗೆ ನಡೆಸಿದ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, "ನಮಾಮಿ ಗಂಗೆ ಮಾದರಿಯಲ್ಲಿ ಕಾವೇರಿ ಹಾಗೂ ಉಪನದಿಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ" ಎಂದಿದ್ದಾರೆ.
ಶೀಘ್ರವೇ ತಮಿಳುನಾಡಿಗೆ ಅನುಮತಿ ನೀಡುವಂತೆ ಹಾಗೂ ಆರ್ಥಿಕ ನೆರವು ನೀಡುವಂತೆ ಕೇಂದ್ರವನ್ನು ಮನವಿ ಮಾಡಿದರು.