ಹಾಸನ, ಫೆ.21 (DaijiworldNews/PY): ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ 13 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಕೆಜಿಎಫ್ ಮೂಲದ ಪ್ರದೀಪ್ ಕುಮಾರ್, ಪುನೀತ್, ನವೀನ್ ಕುಮಾರ್, ಸುನೀಲ್ ಕುಮಾರ್, ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ಹಂಪ್ ಇದ್ದ ಕಾರಣ ಟಾಟಾ ಸುಮೋ ನಿಧಾನ ಮಾಡಿದ ಸಂದರ್ಭ ಹಿಂಬದಿಯಿಂ ಬಂದ ಕ್ವಾಲಿಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕ್ವಾಲಿಸ್ ವಾಹನದಲ್ಲಿದ್ದ ಓರ್ವನ ಸ್ಥಿತಿ ಗಂಭೀರವಾಗಿದೆ. ಮಹಿಳೆಯರು ಹಾಗೂ ಮೂರು ಮಕ್ಕಳು ಸೇರಿದಂತೆ 13 ಮಂದಿ ತೀವ್ರ ಗಾಯಗೊಂಡಿದ್ದಾರೆ.
ಕ್ವಾಲಿಸ್ ವಾಹನದಲ್ಲಿದ್ದ ಎಂಟು ಮಂದಿ ಕೆಜಿಎಫ್ನಿಂದ ಉಡುಪಿಗೆ ವಿವಾಹಕ್ಕೆ ತೆರಳುತ್ತಿದ್ದರು. ಟಾಟಾ ಸುಮೋದಲ್ಲಿದ್ದ ಹತ್ತು ಮಂದಿ ಮುಳಬಾಗಿಲಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು.
ಗಾಯಳುಗಳನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.