ಅಹಮದಾಬಾದ್, ಫೆ. 21 (DaijiworldNews/HR): ಗುಜರಾತ್ನ ಆರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯುತ್ತಿದ್ದು, ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್ನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.
ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ದೇಶದ ಹಲವೆಡೆ ಗೆಲುವನ್ನು ಸಾಧಿಸಿದೆ. ಬಿಜೆಪಿ ಗೆಲುವಿನ ಪಯಣ ಆರಂಭವಾದ ಗುಜರಾತ್ನಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದ್ಧೇವೆ" ಎಂದರು.
ಇನ್ನು ಅಹಮದಾಬಾದ್, ಸೂರತ್, ವಡೋದರ, ರಾಜ್ಕೋಟ್, ಜಾಮ್ನಗರ ಮತ್ತು ಭಾವ್ನಗರ ಮಹಾನಗರ ಪಾಲಿಕೆಯಲ್ಲಿ ಚುನಾವಣೆ ನಡೆಯುತ್ತಿದ್ದು, ಅಹಮದಾಬಾದ್ ಮಹಾನಗರ ಪಾಲಿಕೆಯ ನಾಗ್ಪುರ ಉಪ ವಿಭಾಗ ಕಚೇರಿಯ ಮತಗಟ್ಟೆಯಲ್ಲಿ ಅಮಿತ್ ಶಾ ಮತ್ತು ಅವರ ಕುಟುಂಬದ ಸದಸ್ಯರು ಮತ ಚಲಾಯಿಸಿದ್ದು, ಮತಗಟ್ಟೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.