ಥಾಣೆ, ಫೆ. 21 (DaijiworldNews/HR): ಕಟ್ಟಡ ನಿರ್ಮಾಣದ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ 25 ವರ್ಷದ ಓರ್ವ ವ್ಯಕ್ತಿ ಸಜೀವ ದಹನಗೊಂಡು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಪೂರ್ವ ದೊಂಬಿವಿಲಿಯ ಮಂಡಪ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ರವಿವಾರ ಈ ಘಟನೆ ಸಂಭವಿಸಿದ್ದು, ಬೆಂಕಿ ಅನಾಹುತದಿಂದ 120 ಮನೆಗಳು ಸಂಪೂರ್ಣ ಸುಟ್ಟುಹೋಗಿದೆ ಎಂದು ಅಗ್ನಿಶಾಮಕ ಅಧಿಕಾರಿ ನಾಮದೇವ್ ಚೌಧರಿ ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಅಡುಗೆ ಮಾಡುವ ಸಮಯದಲ್ಲಿ ಅನಿಲ ಸೋರಿಕೆ ಸಂಭವಿಸಿ ಇತರರ ಕೋಣೆಗಳಿಗೆ ಬೆಂಕಿ ವ್ಯಾಪಿಸಿದೆ ಎಂದು ಹೇಳಲಾಗುತ್ತಿದ್ದು, ಎರಡು ಅಗ್ನಿಶಾಮಕ ವಾಹನಗಳು ಎರಡು ಗಂಟೆಗಳ ಕಾಲ ಬೆಂಕಿಯನ್ನು ನಂದಿಸಿವೆ ಎನ್ನಲಾಗಿದೆ.