ನವದೆಹಲಿ, ಫೆ.22 (DaijiworldNews/PY): ದೇಶದಲ್ಲಿ ಇಂಧನ ಬೆಲೆಗಳು ಏರಿಕೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು,"ಜನಸಾಮಾನ್ಯರ ಸಂಕಷ್ಟಗಳಿಂದ ಸರ್ಕಾರ ಲಾಭ ಗಳಿಸಿದೆ" ಎಂದಿದ್ದಾರೆ.
ಮುಂಬೈನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದ ಬೆನ್ನಲ್ಲೇ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
"ಈಗ ಅಂತರಾಷ್ಟ್ರೀಯ ಕಚ್ಚಾತೈಲದ ಬೆಲಗಳ ಮಧ್ಯೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿವೆ. ಇದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿದ್ದ ದರಕ್ಕಿಂತಲೂ ಅರ್ಧ ದರ ಈಗ ಕಚ್ಚಾತೈಲಕ್ಕಿದೆ. ಆದರೂ ಕೂಡಾ ತೈಲ ಬೆಲೆ ಹೆಚ್ಚಳ ಮಾಡಿರುವುದು ಬೇಸರದ ಸಂಗತಿ" ಎಂದು ಪತ್ರದಲ್ಲಿ ತಿಳಿಸಿದ್ದಾರೆ.