ಬೆಂಗಳೂರು, ಫೆ.22 (DaijiworldNews/PY): ರಾಜ್ಯದಲ್ಲಿ ಸೋಮವಾರದಿಂದ 6-8ನೇ ತರಗತಿಗಳು ಪ್ರಾರಂಭವಾಗಲಿದ್ದು, ಬಿಬಿಎಂಪಿ ಹಾಗೂ ಕೇರಳ ಗಡಿ ಭಾಗದ ಶಾಲೆಗಳಲ್ಲಿ 8ನೇ ತರಗತಿ ಮಾತ್ರವೇ ಪ್ರಾರಂಭವಾಗಲಿದೆ. ಆದರೆ, ಶಿಕ್ಷಣ ಇಲಾಖೆಯು, ಮಹಾರಾಷ್ಟ್ರದ ಗಡಿ ಭಾಗದ ಶಾಲೆಗಳ ಬಗ್ಗೆ ಇನ್ನೂ ಸ್ಪಷ್ಟತೆ ನೀಡಿಲ್ಲ.
ಸಾಂದರ್ಭಿಕ ಚಿತ್ರ
"ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಭೀತಿ ಹೆಚ್ಚಾಗುತ್ತಿದ್ದು, ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರಿಗೆ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. 6-8ನೇ ತರಗತಿಗಳು ಪ್ರಾರಂಭವಾಗುತ್ತಿರುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರಕ್ಷತೆಗೆ ಪ್ರಾಮುಖ್ಯತೆ ನೀಡಬೇಕು" ಎಂದು ಸೂಚನೆ ನೀಡಲಾಗಿದೆ.
"ಸಾಮಾಜಿಕ ಅಂತರಕ್ಕೆ ಪ್ರಾಶಸ್ತ್ಯ ನೀಡಬೇಕು. ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಕಡ್ಡಾಯವಾಗಿ ಬಳಸಬೇಕು. ನಿತ್ಯ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು" ಎಂದು ಸೂಚಿಸಲಾಗಿದೆ.