ಪುದುಚ್ಚೇರಿ, ಫೆ.22 (DaijiworldNews/MB) : ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆ ಪುದುಚ್ಚೇರಿಯ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರಕಾರವು ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕೆಲ ದಿನಗಳ ಹಿಂದೆ ಕಾಂಗ್ರೆಸ್ನ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿತ್ತು. ಆರೋಗ್ಯ ಸಚಿವರಾಗಿದ್ದ ಶಾಸಕ ಮಲ್ಲಾಡಿ ಕೃಷ್ಣ ರಾವ್ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ನ ಓರ್ವ ಶಾಸಕ ಹಾಗೂ ಮಿತ್ರಪಕ್ಷ ಡಿಎಂಕೆಯ ಓರ್ವ ಶಾಸಕ ರಾಜೀನಾಮೆ ನೀಡಿದ್ದರು.
ಇದರಿಂಗಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರಕಾರದ ಸ್ಥಾನವು 12 ಕ್ಕೆ ಕುಸಿತವಾಗಿತ್ತು. ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡ ಬೆನ್ನಲ್ಲೇ ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದಾರೆ.