ಮುಂಬೈ, ಫೆ.22 (DaijiworldNews/HR): ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಚಗನ್ ಭುಜಬಲ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, '"ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ ಎರಡು-ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಗಾಗಬೇಕು" ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು "ನಾನು ಆರೋಗ್ಯವಾಗಿದ್ದೇನೆ ಕೊರೊನಾ ಸಮಯದಲ್ಲಿ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಗಮನವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು" ಎಂದು ಹೇಳಿದ್ದಾರೆ.