ಚಿಕ್ಕಬಳ್ಳಾಪುರ, ಫೆ.23 (DaijiworldNews/MB) : ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಓರ್ವ ಹೀರೇನಾಗವಲ್ಲಿ ಗ್ರಾಮ, ಆಂಧ್ರ ಪ್ರದೇಶದ ಮೂವರು, ನೇಪಾಳದ ಒಬ್ಬರು, ಬಾಗೇಪಲ್ಲಿಯ ಒಬ್ಬ ಕಾರ್ಮಿಕರು ಆಗಿದ್ದಾರೆ.
ಸ್ಥಳಕ್ಕೆ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿಣ ಡಾ.ಕೆ.ಸುಧಾಕರ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.