ಲಕ್ನೋ, ಫೆ.23 (DaijiworldNews/PY): ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದ ಬಗ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಬಿಎಸ್ಪಿ ವರಿಷ್ಠೆ ಮಾಯಾವತಿ, "ತೆರಿಗೆ ಹೆಚ್ಚಳದ ಮೂಲಕ ಸಾರ್ವಜನಿಕರ ಕಲ್ಯಾಣಕ್ಕಾಗಿ ಹಣ ಸಂಗ್ರಹಿಸುವುದು ಸೂಕ್ತವಲ್ಲ" ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕೊರೊನಾ, ನಿರುದ್ಯೋಗ ಹಾಗೂ ಹಣದುಬ್ಬರದಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಪೆಟ್ರೋಲ್, ಡೀಸೆಲ್, ಎಲ್ಪಿಜಿಗಳಂತ ಅಗತ್ಯವಾದ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಮತ್ತೆ ಬರೆ ಎಳೆಯುತ್ತಿರುವುದು ಸರಿಯಲ್ಲ" ಎಂದಿದ್ದಾರೆ.
"ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಂತರವಾಗಿ ಪೆಟ್ರೋಲ್, ಡೀಸೆಲ್ ಇತ್ಯಾದಿಗಳ ಮೇಲಿನ ತೆರಿಗೆಯನ್ನು ಅನಿಯಂತ್ರಿತವಾಗಿ ಹೆಚ್ಚಿಸುವ ಮೂಲಕ ಜನರ ಜೇಬಿನ ಮೇಲೆ ಈ ರೀತಿಯಾದ ಹೊರೆ ಹೇರುವುದನ್ನು ಕೂಡಲೇ ನಿಲ್ಲಿಸುವುದು ಬಹಳ ಮುಖ್ಯ. ವಾಸ್ತವಾಗಿ, ಸರ್ಕಾರದಿಂದ ಕೋಟ್ಯಾಂತರ ಬಡವರು, ದುಡಿಯುವ ಜನರಿಗೆ ಹಾಗೂ ದೇಶದ ಮಧ್ಯಮ ವರ್ಗದವರಿಗೆ ದೊಡ್ಡ ಪ್ರಯೋಜನವಾಗಲಿದೆ" ಎಂದು ಹೇಳಿದ್ದಾರೆ.
ದೇಶದದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಂಗಳವಾರವೂ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 25 ಪೈಸೆ ಏಋಇಕೆಯಾಗಿದ್ದು, 90.83 ರೂ. ಆಗಿದ್ದು, ಡೀಸೆಲ್ ಬೆಲೆ ಪ್ರತೀ ಲೀಟರ್ಗೆ 35 ಪೈಸೆ ಹೆಚ್ಚಳವಾಗಿದ್ದು, 81.32 ರೂ ಆಗಿದೆ.