ಬೆಂಗಳೂರು, ಫೆ.23 (DaijiworldNews/PY): ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ.
ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
"ಪಕ್ಷದ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ದಾಂತದ ಅನ್ವಯ ತಾವು ಸಚಿವ ಸ್ಥಾನವನ್ನು ಅಲಂಕರಿಸಿರುವ ಕಾರಣ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.