ಚಂಡೀಗಢ, ಫೆ.24 (DaijiworldNews/MB) : ''ಕೃಷಿ ಕಾನೂನು ವಾಪಾಸ್ ಪಡೆಯುವವರೆಗೂ ಆಮರಣಾಂತ ಉಪವಾಸ ಮಾಡುತ್ತೇನೆ'' ಎಂದು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸಂಬಂಧಿ ಅಭಯ್ ಸಂಧು ಎಚ್ಚರಿಸಿದ್ದಾರೆ.
ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಸಂಧು ಅವರು ಕೂಡಾ ಭಾಗಿಯಾಗಿದ್ದಾರೆ.
ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಭಾರತದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ದಿನವಾದ ಮಾ.23 ರವರೆಗೂ ಗಡು ನೀಡಿರುವ ಸಂಧು ಒಂದು ವೇಳೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಆಮರಣಾಂತ ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ.