ತಿರುವನಂತಪುರಂ, ಫೆ.24 (DaijiworldNews/MB) : ಶಬರಿಮಲೆ ಮಹಿಳಾ ಪ್ರವೇಶದ ವಿರುದ್ದ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ಕೇರಳ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಈ ಪ್ರತಿಭಟನೆಗೆ ಸಂಬಂಧಿಸಿದ ಗಂಭೀರ ಅಪರಾಧಗಳನ್ನು ಹೊರತುಪಡಿಸಿ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ.
ಈ ಹಿಂದೆ ಆರ್ಎಸ್ಎಸ್, ಬಿಜೆಪಿ ಸೇರಿದಂತೆ ಕೆಲ ಸಂಘಟನೆಗಳು ಶಬರಿಮಲೆಗೆ ಮಹಿಳಾ ಪ್ರವೇಶದ ವಿರುದ್ದ ನಡೆದ ಪ್ರತಿಭಟನೆಯ ವಿಚಾರವಾಗಿ ದಾಖಲಾಗಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದವು.
ಈಗ, ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದೆ.