ಶ್ರೀನಗರ, ಫೆ.24 (DaijiworldNews/MB) : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರಾದ ಶಾಲ್ಗುಲ್ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆಯು ಬುಧವಾರ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.
ಉಗ್ರರು ಶಾಲ್ಗುಲ್ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸಿಆರ್ಪಿಎಫ್ ಯೋಧರು ಕಾರ್ಯಾಚರಣೆ ನಡೆಸಿದ್ದು ಈ ಸಂದರ್ಭ ಉಗ್ರರು ಸೈನಿಕರೆಡೆಗೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ನಾಲ್ವರು ಉಗ್ರರು ಹತರಾಗಿದ್ದಾರೆ.
ಇನ್ನೂ ಮೂರು ನಾಲ್ಕು ಉಗ್ರರು ಅವಿತಿದ್ದು ಕಾರ್ಯಾಚರಣೆ ಮುಂದುವರಿದಿದೆ.