ಅಹ್ಮದಾಬಾದ್, ಫೆ.24 (DaijiworldNews/MB) : ವಿಶ್ವದ ಅತ್ಯಂತ ದೊಡ್ಡ ಸ್ಟೇಡಿಯಂ ಎಂಬ ಖ್ಯಾತಿ ಗಳಿಸಿರುವ ಅಹ್ಮದಾಬಾದ್ನ ಸರ್ದಾರ್ ವಲ್ಲಭ್ಭಾಯಿ ಪಟೇಲ್ ಮೊಟೇರಾ ಸ್ಟೇಡಿಯಂಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಮರುನಾಮಕರಣ ಮಾಡಲಾಗಿದ್ದು ಇನ್ನು ಮುಂದೆ ಈ ಸ್ಟೇಡಿಯಂ ನರೇಂದ್ರ ಮೋದಿ ಸ್ಟೇಡಿಯಂ ಆಗಲಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಈ ಮರುನಾಮಕರಣ ಮಾಡಿದ ಸ್ಟೇಡಿಯಂ ಅನ್ನು ಭೂಮಿ ಪೂಜೆಯೊಂದಿಗೆ ಉದ್ಘಾಟನೆ ಮಾಡಿದ್ದು ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಕ್ರೀಡಾ ಸಚಿವ ಕಿರಣ್ ರಿಜಿಜು ಹಾಗೂ ಇನ್ನಿತರ ಪ್ರಮುಖ ವ್ಯಕ್ತಿಗಳು ಉಪಸ್ಥಿತರಿದ್ದರು.
ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯಲಿರುವ ಕ್ರಿಕೆಟ್ ಪಂದ್ಯಾಟದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.