ಹರ್ಯಾಣ, ಫೆ.25 (DaijiworldNews/MB) : ಹರ್ಯಾಣದ ಕರ್ನಲ್ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಉಂಟಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಓರ್ವನಿಗೆ ಗಾಯವಾಗಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೆಯೇ ಈ ಸ್ಪೋಟಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದರು.
ಮೃತರೆಲ್ಲರೂ ವಲಸೆ ಕಾರ್ಮಿಕರಾಗಿದ್ದಾರೆ.