ನವದೆಹಲಿ, ಫೆ. 25 (DaijiworldNews/HR) : ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಕೊಲ್ಲಮ್ ಜಿಲ್ಲೆಗೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಸಮುದ್ರಕ್ಕೆ ಹಾರಿ ಈಜಾಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬುಧವಾರದಂದು ಕೊಲ್ಲಂ ಜಿಲ್ಲೆಗೆ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ನೀಡಿದ್ದ ರಾಹುಲ್, ಅಲ್ಲಿ ತಂಗಸ್ಸೆರಿ ಸಮುದ್ರದಲ್ಲಿ ತಮ್ಮ ಸ್ನೇಹಿತರು ಹಾಗೂ ಮೀನುಗಾರರೊಂದಿಗೆ ಈಜಾಡಿದ್ದಾರೆ ಎನ್ನಲಾಗಿದೆ.
ಕೆಲವು ಮೀನುಗಾರರು ಮೀನು ಹಿಡಿಯಲು ಬಲೆ ಬೀಸಿ ಸಮುದ್ರಕ್ಕೆ ಜಿಗಿದಿದ್ದು, ಅವರೊಟ್ಟಿಗೆ ರಾಹುಲ್ ಗಾಂಧಿ ಸಹ ದೋಣಿಯಿಂದ ನೀರಿಗೆ ಜಿಗಿದಿದ್ದಾರೆ.
ಇನ್ನು ರಾಹುಲ್ ಗಾಂಧಿಯವರು ಸಮುದ್ರ ತೀರದಲ್ಲಿ ಸುಮಾರು ಎರಡೂವರೆ ಗಂಟೆ ಕಾಲ ಕಳೆದು ಬಳಿಕ ಅಲ್ಲಿನ ಮೀನುಗಾರರೊಂದಿಗೆ ಮೀನಿನ ಅಡುಗೆ ಸವಿದಿದ್ದಾರೆ ಎನ್ನಲಾಗಿದೆ.