ಬೆಂಗಳೂರು, ಫೆ. 25 (DaijiworldNews/HR): ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮತ್ತು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಮುಖಂಡರು ಭಾಗಿಯಾಗಿದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಬಾಬರಿ ಮಸೀದಿ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮತ್ತು ತ್ರಿವಳಿ ತಲಾಖ್ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಎಸ್ಡಿಪಿಐ, ಎಸ್ಎಫ್ಐ ಮುಖಂಡರು ಕೋಪಗೊಂಡಿದ್ದಾರೆ ಎನ್ನಲಾಗಿದೆ.
ಹಿಂಸಾಚಾರದಲ್ಲಿ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಯನ್ನು ಧ್ವಂಸಗೊಳಿಸಿದ್ದರು, ಕೆಲವು ಮನೆಗಳಿಗೆ ಬೆಂಕಿ ಹಚ್ಚುವುದರ ಜೊತೆಗೆ ಪೊಲೀಸ್ ಮತ್ತು ಖಾಸಗಿ ವಾಹನಗಳನ್ನು ಸುಟ್ಟು ಹಾನಿಗೊಳಿಸಿದರು. ಅಕ್ಟೋಬರ್ 11, 2020 ರಂದು ಕಲ್ಲು ತೂರಾಟದಲ್ಲಿ ಅನೇಕ ಪೊಲೀಸರು ಗಾಯಗೊಂಡಿದ್ದರು ಮತ್ತು ಹಿಂಸಾಚಾರವನ್ನು ತಡೆಯಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದರು.
ಸಿಎಎ ಮತ್ತು ಎನ್ಆರ್ಸಿ ವಿಷಯದಲ್ಲಿ ಸರ್ಕಾರದ ವಿರುದ್ಧ ಸುದೀರ್ಘ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರು ದೊಡ್ಡ ಪ್ರಮಾಣದ ಅವಾಂತರಗಳನ್ನು ಪ್ರಾರಂಭಿಸುವ ಮೂಲಕ ಕೋಮು ಸೌಹಾರ್ದತೆಯನ್ನು ನಿವಾರಿಸಲು ಕಾಯುತ್ತಿದ್ದಾರೆ ಎಂದು ಎನ್ಐಎ ಹೇಳಿದೆ.
ಎಸ್ಡಿಪಿಐ ಸದಸ್ಯರಾದ ಫೈರೋಜ್ ಪಾಷಾ, ಮುಜಮ್ಮಿಲ್ ಪಾಷಾ ಮತ್ತು ಇತರರು ಹಿಂದೂ ಸಮುದಾಯದ ಕೋಮು ಭಾವೋದ್ರೇಕಗಳನ್ನು ಹುಟ್ಟುಹಾಕುವ ಸಲುವಾಗಿ ಹಿಂಸಾಚಾರಕ್ಕೆ ಇಳಿದಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಹುಟ್ಟುಹಾಕುವ ಪೋಸ್ಟ್ ಮಾಡುತ್ತಿದ್ದರು. ಈ ನಾಯಕರು ಫೇಸ್ಬುಕ್ ಪೋಸ್ಟ್ಗಳಿಂದಾಗಿ ಅಶಾಂತಿ ಸೃಷ್ಟಿಯಾಗಲು ಕಾಯುತ್ತಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ಬೆಂಬಲವನ್ನು ಸೆಳೆಯುವ ಮೂಲಕ ಅವಾಂತರಗಳನ್ನು ಸೃಷ್ಟಿಸುವ ಅವಕಾಶವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಎನ್ಐಎ ಹೇಳಿದೆ.