ಕೋಲ್ಕತ್ತಾ, ಫೆ. 25 (DaijiworldNews/HR): ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಕೂಟರ್ನಲ್ಲಿ ಸಂಚರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.
ಮಮತಾ ಬ್ಯಾನರ್ಜಿ ಅವರು ಮೇಯರ್ ಫರೀದ್ ಹಕೀಮ್ ಅವರೊಂದಿಗೆ ಸ್ಕೂಟರ್ನಲ್ಲಿ ಸಂಚರಿಸುತ್ತ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಮಮತಾ ಬ್ಯಾನರ್ಜಿ ಅವರು್ ಹೆಲ್ಮೆಟ್ ಧರಿಸಿ, ಪೆಟ್ರೋಲ್ ಬೆಲೆ ಏರಿಕೆಯ ಖಂಡಿಸಿದರು. ಪ್ರದರ್ಶನ ಫಲಕವನ್ನು ಕುತ್ತಿಗೆಗೆ ಹಾಕಿಕೊಂಡು ಸ್ಕೂಟರ್ನಲ್ಲಿ ಹಜ್ರಾಮೋರ್ನಿಂದ ಐದು ಕಿ.ಮೀ ದೂರದ ಪ್ರಯಾಣ ಮಾಡಿದ್ದಾರೆ ಎನ್ನಲಾಗಿದೆ.