ನವದೆಹಲಿ, ಫೆ. 25 (DaijiworldNews/HR): ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಿಗೆ ಸೂಚಿಸಿವೆ ಎಂದು ತಿಳಿದು ಬಂದಿದೆ.
ಗಡಿ ನಿಯಂತ್ರಣ ರೇಖೆ(ಸಾಂಧರ್ಭಿಕ ಚಿತ್ರ)
ಈ ಕುರಿತು ಜಂಟಿ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಣ ಸಭೆಯಲ್ಲಿ ಒಟ್ಟಿಗೆ ಮೂಡಿ ಬಂದಿದ್ದು, ಬುಧವಾರ ಮಧ್ಯರಾತ್ರಿಯಿಂದಲೇ ಕದನ ವಿರಾಮ ನಿಯಮಗಳ ಒಪ್ಪಂದವನ್ನು ಪಾಲಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ ದೇಶಗಳ ಹಿತದೃಷ್ಟಿಯಿಂದ ಗಡಿಯುದ್ಧಕ್ಕೂ ಶಾಂತಿಯನ್ನು ಭಂಗಗೊಳಿಸಿ ಹಿಂಸಾಚಾರಕ್ಕೆ ಕಾರಣವಾಗುವ ಪ್ರಮುಖ ಸಮಸ್ಯೆಗಳನ್ನು ಆಲಿಸಲು ಪರಸ್ಪರ ಒಪ್ಪಿಗೆ ಸೂಚಿಸಿ ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.