ಬೆಂಗಳೂರು, ಫೆ.26 (DaijiworldNews/HR): ಪುಲ್ವಾಮ ಉಗ್ರ ದಾಳಿಗೆ ಪ್ರತಿಯಾಗಿ ಭಾರತದ ವಾಯುಪಡೆ ನಡೆಸಿದ ಬಾಲಾಕೋಟ್ ವೈಮಾನಿಕ ದಾಳಿ ನಡೆದು ಇಂದಿಗೆ ಎರಡು ವರ್ಷ ಆಗಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಭಾರತೀಯ ಸಶಸ್ತ್ರ ಪಡೆಗಳನ್ನು ಕೊಂಡಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, "ಬಾಲಾಕೋಟ್ ವೈಮಾನಿಕದಾಳಿಗೆ ಇಂದಿಗೆ ಎರಡು ವರ್ಷ ಆಗಿದ್ದು, ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನಾನು ನಮನ ಸಲ್ಲಿಸುತ್ತೇನೆ. ಬಾಲಾಕೋಟ್ ದಾಳಿಯ ಯಶಸ್ಸು ಭಯೋತ್ಪಾದನೆ ವಿರುದ್ಧದ ಭಾರತದ ಬಲವಾದ ಇಚ್ಚಾಶಕ್ತಿಯನ್ನು ತೋರಿಸುತ್ತದೆ. ಭಾರತವನ್ನು ಸುರಕ್ಷಿತವಾಗಿರಿಸಿರುವ ಸಶಸ್ತ್ರಪಡೆಗಳ ಬಗ್ಗೆ ಹಮ್ಮೆಯಾಗುತ್ತದೆ" ಎಂದಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, "2019ರ ಈ ದಿನ ಭಾರತೀಯ ವಾಯುಪಡೆಯು ಪುಲ್ವಾಮ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆ ನೀಡುವ ಮೂಲಕ, ಭಯೋತ್ಪಾದನೆ ವಿರುದ್ಧದ ಭಾರತದ ಹೊಸ ನೀತಿಗಳನ್ನು ಸ್ಪಷ್ಟಪಡಿಸಿತು" ಎಂದು ಹೇಳಿದ್ದಾರೆ.