ಬೆಂಗಳೂರು, ಫೆ.26 (DaijiworldNews/PY): "ನಾವು 18 ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿದ್ದು, ಚುನಾವಣೆಯಲ್ಲಿ ಎಲ್ಲರೂ ಕೂಡಾ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ" ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
"ಚುನಾವಣಾ ಪ್ರಚಾರ ಕಾರ್ಯ ಶುಕ್ರವಾರದಿಂದ ಪ್ರಾರಂಭವಾಗಲಿದೆ.ಚುನಾವಣಾ ದಿನಾಂಕ ಪ್ರಕಟಿಸುವ ಮುನ್ನವೇ ಕ್ಷೇತ್ರದ ಎಲ್ಲಾ ಮತದಾರರನ್ನು ಭೇಟಿ ಮಾಡಬೇಕು" ಎಂದಿದ್ದಾರೆ.
"ಇನ್ನು 18 ಆಕಾಂಕ್ಷಿಗಳ ಪೈಕಿ ಓರ್ವರಿಗೆ ಟಿಕೆಟ್ ನೀಡಲಾಗುವುದು. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರ ಪೈಕಿ ಯಾರಾದರೂ ಒಬ್ಬರು ಕಣಕ್ಕಿಳಿಬಹುದಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಕೈಗೊಳ್ಳಲಿದೆ" ಎಂದು ಹೇಳಿದ್ದಾರೆ.
"ಚುನಾವಣೆಯ ದಿನಾಂಕ ಪ್ರಕಟವಾದ ಬಳಿಕ ಪಕ್ಷದ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ಗೆ ರವಾನೆ ಮಾಡಲಿದೆ" ಎಂದು ತಿಳಿಸಿದ್ದಾರೆ.
"ಬಿಜೆಪಿಯು, 2018ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಕಳೆದುಕೊಂಡಿದ್ದು, ಉಪಚುನಾವಣೆಯಲ್ಲಿ ನಾವು ಜಯ ಸಾಧಿಸುವುದು ಖಚಿತ" ಎಂದಿದ್ದಾರೆ.