ಮಲಪ್ಪುರಂ, ಫೆ.26 (DaijiworldNews/PY): "ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಇ.ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು" ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
"ಕೇರಳದ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ವಿಜಯಯಾತ್ರೆಯು ಮಲಪ್ಪುರಂನ ಚಂಗರಮಕುಳಂ ತಲುಪಿದ ಸಂದರ್ಭ ಗುರುವಾರ ರಾತ್ರಿ ಶ್ರೀಧರನ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ" ಎಂದು ನಾಯಕರು ತಿಳಿಸಿದ್ದಾರೆ.
ಶ್ರೀಧರನ್ ಅವರು ಕೇಂದ್ರ ಸಚಿವ ಆರ್.ಕೆ.ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಂತರ ಮಾತನಾಡಿದ ಶ್ರೀಧರನ್ ಅವರು, "ಇದು ನನ್ನ ಜೀವನದ ಅತ್ಯುತ್ತಮ ಕ್ಷಣಗಳಲ್ಲಿ ಒಂದಾಗಿದೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಸುರೇಂದ್ರನ್ ಅವರಿಗೆ ಧನ್ಯವಾದಗಳು" ಎಂದಿದ್ದಾರೆ.
ಮೆಟ್ರೋ ಮ್ಯಾನ್ ಎಂದು ಜನಪ್ರಿಯರಾಗಿರುವ ಶ್ರೀಧರನ್ ಅವರು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಎಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ತಿಳಿಸಿದ್ದರು.