ನವದೆಹಲಿ, ಫೆ.26 (DaijiworldNews/HR): ಜಾತಿವಾರು ಜನಗಣತಿ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಸಂಬಂಧಿಸಿದ ಇತರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.
ಜಾತಿವಾರು ಜನಗಣತಿ ನಡೆಸುವುದಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಇನ್ನು ಈ ಕುರಿತಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಸಂಬಂಧಿಸಿದ ಇತರರಿಗೆ ನೋಟಿಸ್ ನೀಡಿದೆ.