ಚೆನ್ನೈ, ಫೆ.26 (DaijiworldNews/PY): "ರಾಷ್ಟ್ರೀಯ ವೈದ್ಯಕೀಯ ಆಯೋಗವು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಪಾರದರ್ಶಕತೆಯನ್ನು ತರಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ತಮಿಳುನಾಡಿನ ಡಾ. ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವವನ್ನು ಉದ್ದೇಶಿಸಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, "ಸರ್ಕಾರವು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಪರಿವರ್ತನೆ ತರಲು ಶ್ರಮಿಸುತ್ತಿದೆ. ಆಯೋಗವು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಉತ್ತಮವಾದ ಮಾನವ ಸಂಪನ್ಮೂಲವನ್ನು ದೊರಕುವಂತೆ ಮಾಡುವುದು" ಎಂದರು.
"ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 30 ಸಾವಿರ ಎಂಬಿಬಿಎಸ್ ಸೀಟುಗಳನ್ನು ಹೆಚ್ಚು ಮಾಡಲಾಗಿದೆ. 2014ರಿಂದ ಈವರೆಗೆ ಶೇ.80ರಷ್ಟು ಸೀಟುಗಳನ್ನು ಹೆಚ್ಚಿಸಲಾಗಿದೆ" ಎಂದು ತಿಳಿಸಿದರು.