ಪಶ್ಚಿಮ ಬಂಗಾಳ, ಫೆ. 26 (DaijiworldNews/SM): ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಪೈಕಿ ಪಶ್ಚಿಮ ಬಂಗಾಳದ 294 ವಿಧಾನಸಭೆ ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಸುವ ನಿರ್ಧಾರವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಇದರ ವಿರುದ್ಧ ಸಿಎಂ ಮಮತಾ ಅಸಮಾಧಾನಗೊಂಡಿದ್ದಾರೆ.
ಅಸ್ಸಾಂನಲ್ಲಿ ಮೂರು ಹಂತದಲ್ಲಿ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸುತ್ತಿದ್ದೀರಿ. ಹಾಗಿರುವ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಯಾಕೆ ಎಂಟು ಹಂತಗಳಲ್ಲಿ ಮತದಾನ ನಡೆಸುತ್ತೀರಿ ಎಂದು ಮಮತಾ ಪ್ರಶ್ನಿಸಿದ್ದಾರೆ. ಬಿಜೆಪಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ.
'ಇದನ್ನು ಅವರು ಮೋದಿ ಮತ್ತು ಅಮಿತ್ ಶಾ ಅವರ ಸಲಹೆಯಂತೆ ಮಾಡಿರಬಹುದೇ? ಇದನ್ನು ಅವರ ಪ್ರಚಾರಕ್ಕೆ ಅನುಕೂಲಕರವಾಗಿರುವಂತೆ ಮಾಡಿರಬಹುದೇ? ಎಂದು ಸಂಶಯ ವ್ಯಕ್ತಪಡಿಸಿರುವ ದೀದಿ ಅವರನ್ನು ನಾಶ ಮಾಡುತ್ತೇವೆ ಎಂದು ಕಿಡಿ ಖಾರಿದ್ದಾರೆ.