ನವದೆಹಲಿ, ಫೆ.27 (DaijiworldNews/HR): ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು 79ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, "ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಬಿಜೆಪಿಯಲ್ಲಿರುವ ಅನುಭವಿ ನಾಯಕರುಗಳಲ್ಲಿ ಯಡಿಯೂರಪ್ಪನವರು ಪ್ರಮುಖರು. ಅವರು ತಮ್ಮ ಜೀವನವನ್ನು ರೈತರು ಮತ್ತು ಬಡವರ ಏಳಿಗೆಗೆ ಮುಡುಪಾಗಿಟ್ಟವರು. ಅವರಿಗೆ ದೇವರು ದೀರ್ಘ ಆಯುರಾರೋಗ್ಯ ನೀಡಲಿ" ಎಂದಿದ್ದಾರೆ.
ಅಮಿತ್ ಶಾ ಟ್ವೀಟ್ ಮಾಡಿ, "ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಕರ್ನಾಟಕದ ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಶ್ಲಾಘನೀಯವಾಗಿದ್ದು, ಅವರಿಗೆ ದೇವರು ಅವನಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ" ಎಂದು ಹೇಳಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, "ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ" ಎಂದಿದ್ದಾರೆ.