ಬೆಂಗಳೂರು, ಫೆ.27 (DaijiworldNews/HR): ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿದ್ದು, ಅದರ ತನಿಖೆಗೆ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ 20 ಮಂದಿಯ ಜಂಟಿ ಸದನ ಸಮಿತಿ ರಚಿಸಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.
ಆರೋಪದ ಕುರಿತು ತನಿಖೆ ನಡೆಸಿ ಜೂನ್ 30ರ ಒಳಗಾಗಿ ಸಮಿತಿ ವರದಿ ನೀಡುವಂತೆ ಸೂಚಿಸಿದ್ದಾರೆ.
ಸಮಿತಿಯಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಎ.ಎಸ್. ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ಕೆ. ಶಿವನಗೌಡ ನಾಯಕ್, ಬಿ.ಸಿ ನಾಗೇಶ್, ಪಿ. ರಾಜೀವ್, ಹಾಲಪ್ಪ ಆಚಾರ್, ರಾಜೇಶ್ ನಾಯ್ಕ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಎ.ಟಿ. ರಾಮಸ್ವಾಮಿ, ವೆಂಕಟ್ರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ವಿಜಯ್ ಸಿಂಗ್, ಎಚ್.ಎಂ ರಮೇಶ್ ಗೌಡ, ದೇವೇಗೌಡ, ಎಸ್.ವಿ ಸಂಕನೂರ ಇದ್ದಾರೆ ಎನ್ನಲಾಗಿದೆ.
ಇನ್ನು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಹಾಗೂ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಶಾಸಕರು ಆರೋಪ ಮಾಡಿದ್ದು, ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.