ಹಾಸನ, ಫೆ.27 (DaijiworldNews/PY): "ಕಾಂಗ್ರೆಸ್ ಪಕ್ಷ ಮೈಸೂರು ಮೇಯರ್ ಆಯ್ಕೆ ವಿಷಯದಲ್ಲಿ ಬೆತ್ತಲಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲು ಸಿದ್ದರಾಮಯ್ಯ ಅವರು ಒಬ್ಬರೇ ಸಾಕಿತ್ತು. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಂದಿದ್ದಾರೆ" ಎಂದು ತಿಳಿಸಿದರು.
"ಕಾಂಗ್ರೆಸ್ನಲ್ಲಿ ಪ್ರಬಲ ನಾಯಕತ್ವ ಇಲ್ಲ. ಕಾಂಗ್ರೆಸ್ ಪಕ್ಷವನ್ನು ಜನರೇ ತಿರಸ್ಕರಿಸುತ್ತಿದ್ದಾರೆ. ನಾಯಕರು ಕಚ್ಚಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುತ್ತಿದ್ದಾರೆ" ಎಂದರು.