ಬೆಂಗಳೂರು, ಫೆ.28 (DaijiworldNews/MB) : ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರೆ ಮೂರು ದಿನದಲ್ಲಿ ಹಿಂತಿರುಗಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಅವರು ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ನಡೆದ ಸ್ಪೋಟ ಪ್ರಕರಣಗಳ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ''ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರೆ,ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದಿತಿರುಗಿಸಬೇಕು'' ಎಂದು ತಿಳಿಸಿದ್ದಾರೆ.
''ಮೂರು ದಿನದಲ್ಲಿ ಹಿಂತಿರುಗಿಸದಿದ್ದರೆ ಕಾನೂನು ಕ್ರಮ ಖಚಿತ. ನಮ್ಮ ಇಲಾಖೆ ಅಧಿಕಾರಿಗಳು ಎಲ್ಲ ಕಡೆ ತಪಾಸಣೆ ನಡೆಸಲಿದ್ದಾರೆ. ಹಾಗೊಂದು ವೇಳೆ ಯಾರಾದರೂ ಸಂಗ್ರಹಿಸಿಟ್ಟಿಕೊಂಡಿರುವುದು ಕಂಡುಬಂದರೆ ಕ್ರಷರ್ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು'' ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.