ನವದೆಹಲಿ, ಫೆ.28 (DaijiworldNews/HR): ದೇಶದಾದ್ಯಂತ ಯೋಧರ ನೇಮಕಾತಿಗೆ ನಡೆಯಬೇಕಾಗಿದ್ದ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ಪರೀಕ್ಷೆಯನ್ನು ಸೇನೆ ರದ್ದುಗೊಳಿಸಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುಣೆಯ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಸೈನಿಕರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದನ್ನು ಪತ್ತೆ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ ಎನ್ನಲಾಗಿದೆ.