ಮುಂಬೈ, ಫೆ.28 (DaijiworldNews/HR): ಟಿಕ್ ಟಾಕ್ ಸ್ಟಾರ್ ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾಥೋಡ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನುಇಂದು ಪತ್ನಿ ಸಮೇತರಾಗಿ ಭೇಟಿ ಮಾಡಿದ್ದ ಸಂಜಯ್ ರಾಥೋಡ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್, "ನಾನು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ನನ್ನ ರಾಜಿನಾಮೆ ಸಲ್ಲಿಸಿದ್ದೇನೆ. ವಿರೋಧ ಪಕ್ಷಗಳು ವಿಧಾನಸಭೆ ಕಲಾಪಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಹೇಳಿದ್ದು, ನನ್ನಿಂದ ಸರ್ಕಾರಕ್ಕೆ ಬೇಸರವಾಗುವುದು ಬೇಡ ಎಂಬ ಉದ್ದೇಶದಿಂದ ನಾನು ರಾಜಿನಾಮೆ ಸಲ್ಲಿಸುತ್ತಿದ್ದು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಆಗಬೇಕು" ಎಂದರು.
ಇನ್ನು ಟಿಕ್ ಟಾಕ್ ಸ್ಟಾರ್ ಪೂಜಾ ಚೌವಾಣ್ ಫೆಬ್ರವರಿ 8ರಂದು ಪುಣೆಯಲ್ಲಿ ಬಿಲ್ಡಿಂಗ್ ಮೇಲಿಂದ ಕೆಳಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಸಚಿವ ರಾಥೋಡ್ ಹೆಸರು ಬಲವಾಗಿ ಕೇಳಿಬಂದಿತ್ತು. ಇದೇ ಕಾರಣಕ್ಕೆ ವಿಪಕ್ಷಗಳು ಸಚಿವರ ತಲೆದಂಡಕ್ಕೆ ಆಗ್ರಸಿಹಿದ್ದವು ಎನ್ನಲಾಗಿದೆ.