ಶಿವಮೊಗ್ಗ, ಫೆ. 28 (DaijiworldNews/SM): ರಾಜ್ಯದ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಆನವಟ್ಟಿಯಲ್ಲಿ ಮೂಗೂರು ಕೆರೆ ತುಂಬಿಸುವ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ ಸಿಎಂ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 234 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಸ್ಥಿತರಿದ್ದರು.