ನವದೆಹಲಿ, ಫೆ. 28 (DaijiworldNews/SM): ಕೇಂದ್ರ ಸರಕಾರದ ವಿರುದ್ಧ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಜಾರಿಗೆ ತಂಡಿರುವ ಮೂರು ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರ ರೈತರ ಭೂಮಿಯನ್ನು ವಶಪಡಿಸಿಕೊಂಡು ಮೂರ್ನಾಲ್ಕು ಬಂಡವಾಳ ಶಾಹಿಗಳಿಗೆ ನೀಡಲು ಮುಂದಾಗಿದೆ. ಆ ಮೂಲಕ ಕೇಂದ್ರ ಸರಕಾರ ರೈತರ ವಿರುದ್ಧ ಸಮರ ಸಾರಲು ಸಜ್ಜಾಗಿದೆ. ಒಂದೊಮ್ಮೆ ಈ ಕಾಯ್ದೆ ಜಾರಿಗೆ ಬಂದಲ್ಲಿ ರೈತರು ತಮ್ಮ ಜಮೀನಿನಲ್ಲೇ ಕಾರ್ಮಿಕರಾಗುತ್ತಾರೆ. ಈ ಕಾರಣದಿಂದ ಈ ಕಾಯ್ದೆ ರೈತರ ಪಾಲಿಗೆ ನುಂಗಲಾರದ ಬಿಸಿ ತುಪ್ಪದಂತಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
ಇನ್ನು ಕಳೆದ ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣ ಪೂರ್ವ ನಿಯೋಜಿತ ಕೃತ್ಯವಾಗಿದೆ. ಪ್ರತಿಭಟನಾ ನಿರತ ರೈತರಿಗೆ ದೆಹಲಿಯ ಮಾರ್ಗಗಳು ಗೊತ್ತಿವಲ್ಲದಿದ್ದಾಗ ಅವರಿಗೆ ತಪ್ಪು ದಾರಿಯನ್ನು ತೋರಿದ್ದು ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ.