ನವದೆಹಲಿ, ಫೆ. 28 (DaijiworldNews/SM): ದೇಶದಲ್ಲಿ ಕೊರೋನಾ ಸೋಂಕಿಗೆ ಮೊದಲ ಹಂತದಲ್ಲಿ ಬಹುತೇಕ ಆರೋಗ್ಯ ಕಾರ್ಯಕರ್ತರಿಗೆ ಚಿಕಿತ್ಸೆ ನೀಡಲಾಗಿದೆ. ಇದೀಗ ಎರಡನೇ ಹಂತದ ಲಸಿಕೆ ನೀಡುವ ಕಾರ್ಯಕ್ಕೆ ಮಾರ್ಚ್ 1ರಿಂದ ಚಾಲನೆ ಸಿಗಲಿದೆ.
ಇನ್ನು ಎರಡನೇ ಹಂತದಲ್ಲಿ ಸಾರ್ವಜನಿಕರು ಲಸಿಕೆ ಪಡೆಯುವ ಅವಕಾಶವಿದೆ. ಇದಕ್ಕಾಗಿ ಸಾರ್ವಜನಿಕರು ತಮ್ಮ ಹೆಸರು ನೋಂದಾಯಿಸಬೇಕು. ಕೊ-ವಿನ್ ಅಪ್ಲಿಕೇಷನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕಾಗಿದೆ.
ಮಾರ್ಚ್ ಒಂದರ ಸೋಮವಾರ ಬೆಳಗ್ಗೆ 9 ಗಂಟೆಯಿಂದಲೇ ಹೆಸರು ನೋಂದಾವಣೆಗೆ ಅವಕಾಶವಿದೆ. ಆರೋಗ್ಯ ಕಾರ್ಯಕರ್ತರಿಗೆ ನೀಡಲು ಬಳಸಿದ್ದ ಅಪ್ಲಿಕೇಷನ್ ಅನ್ನೇ ಅಪ್ ಡೇಟ್ ಮಾಡಲಾಗಿದ್ದು, ಸಾರ್ವಜನಿಕರು ಇದರಲ್ಲೇ ನೋಂದಾಯಿಸಿಕೊಳ್ಳಬಹುದಾಗಿದೆ. ಎರಡನೇ ಹಂತದಲ್ಲಿ 27 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.