ಕೋಲ್ಕತ್ತ, ಮಾ.01 (DaijiworldNews/PY): ಸರಕು ಹಾಗೂ ತೆರಿಗೆ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ತರುವು ಪ್ರಸ್ತಾವಕ್ಕೆ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಮಣಿಯನ್ ಬೆಂಬಲ ಸೂಚಿಸಿದ್ದಾರೆ.
ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ ಮಹಿಳಾ ಘಟಕದ ಸದಸ್ಯರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದು ಸೂಕ್ತವಾದ ನಡೆ. ಆದರೆ, ಜಿಎಸ್ಟಿ ಮಂಡಳಿಯು ಆ ತೀರ್ಮಾನವನ್ನು ಕೈಗೊಳ್ಳಬೇಕಿದೆ" ಎಂದಿದ್ದಾರೆ.
"ಆಹಾರ ಉತ್ಪನ್ನಗಳ ದರ ಹೆಚ್ಚಳದ ಕಾರಣ ಹಣದುಬ್ಬರದ ಒತ್ತಡವೂ ಉಂಟಾಗಿರಬಹುದು" ಎಂದು ತಿಳಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಮನವಿ ಮಾಡಿದ್ದು, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವಂತೆ ಕೋರಿದ್ದಾರೆ.