ಕೆಂಗೇರಿ, ಮಾ. 01(DaijiworldNews/HR): "ಕಳೆದ 3 ವರ್ಷಗಳಲ್ಲಿ ಕಾಯ್ದೆಗಳ ಹೆಸರಿನಲ್ಲಿ ರೈತರಿಂದ ಸುಮಾರು 25 ಕೋಟಿ ದಂಡ ವಸೂಲಿ ಮಾಡಲಾಗಿದ್ದು, ಇಂತಹ ದಬ್ಬಾಳಿಕೆಯನ್ನು ನಿಲ್ಲಿಸುವುದಕ್ಕಾಗಿಯೇ ಕೃಷಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ" ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಅವರು, "ನೂತನ ಕೃಷಿ ಕಾಯ್ದೆಗಳಿಂದ ರೈತರ ಅಭಿವೃದ್ಧಿಯಾಗುತ್ತದೆ, ಆದರೆ ವಿರೋಧ ಪಕ್ಷಗಳು ಕಾಯ್ದೆ ಕುರಿತು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ರೈತರ ಆದಾಯ ಹೆಚ್ಚಿಸಲು ಹಾಗೂ ರೈತ ಉತ್ಪನ್ನಗಳಿಗೆ ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ದೊರಕಿಸಲು ಈ ಕೃಷಿ ಕಾಯ್ದೆಗಳನ್ನು ಜಾರ್ರಿಗೊಳಿಸಲಾಗಿದೆ ಎಂದರು.
"ಆತ್ಮ ನಿರ್ಭರ ಯೋಜನೆಯಡಿ ಮಂಡ್ಯದ ಬೆಲ್ಲ, ಬ್ಯಾಡಗಿ ಮೆಣಸಿನಕಾಯಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ರೈತರ ಆದಾಯ ಹೆಚ್ಚಾಗಲಿದೆ. ರೈತ ಪರ ಕಾರ್ಯ ನಿರ್ವಹಿಸುವ ಯಾವುದೇ ಸಂಘ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು" ಎಂದು ಭರವಸೆ ನೀಡಿದ್ದಾರೆ.
ಇನ್ನು ಇದೇ ಸಂಧರ್ಭದಲ್ಲಿ ರೈತರು ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ 'ವರ್ತ್ ಮೈ ವ್ಯಾಲ್ಯೂ' ಮೊಬೈಲ್ ಅಪ್ಲಿಕೇಷನ್ ಅನ್ನು ಬಿಡುಗಡೆಗೊಳಿಸಿದ್ದಾರೆ.