ಮೈಸೂರು, ಮಾ. 01(DaijiworldNews/HR): ರಾಜ್ಯ ಸರ್ಕಾರವು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸಬಾರದು, ಬದಲಾಗಿ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು" ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ಹೇಳಿದ್ದಾರೆ.
ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ಸರ್ಕಾರದಿಂದ ಮಾಡುತ್ತಿದೆ. ಇತ್ತೀಚಿಗೆ ಬಿಡುಗಡೆಯಾದ ಕನ್ನಡ ಸಿನಿಮಾವೊಂದರಲ್ಲಿ ಕೂಡ ಬ್ರಾಹ್ಮಣರನ್ನು ಅವಹೇಳನವಾಗಿ ತೋರಿಸಲಾಗಿತ್ತು. ಇಂತಹ ಘಟನೆ ಇದೇ ಮೊದಲಲ್ಲ. ಇದಕ್ಕೆ ಪ್ರತಿರೋಧ ನಡೆದಿದ್ದು ಒಳ್ಳೆಯ ಬೆಳವಣಿಗೆಯಾಗಿ" ಎಂದರು.
ಇನ್ನು "ರಾಜ್ಯ ಸರ್ಕಾರ ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುತ್ತಿದ್ದು, ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿಯಾಗಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಯೊಂದೇ ಪರಿಹಾರವಾಗಿದ್ದು ಅವರ ವಿರುದ್ಧ ಹೋರಾಡಲು ಸಂಘಟನೆಯ ಅವಶ್ಯಕತೆ ಇದೆ" ಎಂದು ಹೇಳಿದ್ದಾರೆ.