ಬೆಂಗಳೂರು, ಮಾ.01 (DaijiworldNews/PY): ವಿದ್ಯಾರ್ಥಿಯೋರ್ವ ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಜಯಂತ್ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ವಿ.ವಿ.ಪುರಂನಲ್ಲಿರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿ.
ಜಯಂತ್ ರೆಡ್ಡಿ ಮೂರನೇ ಸೆಮಿಸ್ಟರ್ನ ವಿದ್ಯಾರ್ಥಿಯಾಗಿದ್ದು, ಇಂದು ಕಳೆದ ವರ್ಷ ಬಾಕಿಯಾಗಿದ್ದ ಪರೀಕ್ಷೆ ಬರೆಯಲು ಬಂದಿದ್ದ. ಆದರೆ, ಆತ ಪರಿಕ್ಷೆಗೂ ಮುನ್ನ ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೀವ್ರ ಗಾಯಗೊಂಡಿದ್ದ ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ವಿ.ವಿ.ಪುರಂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.