ಶಿವಮೊಗ್ಗ, ಮಾ 01 (DaijiworldNews/MS): "ರಾಜ್ಯವನ್ನು ಕಾಡುತ್ತಿರುವ ನೆರೆ ಹಾವಳಿ ಹಾಗೂ ಕೊವೀಡ್ ಸಂಕಷ್ಟದ ನಡುವೆಯೂ , ಮಾರ್ಚ್ 8ರಂದು ಉತ್ತಮ ಬಜೆಟ್ ಮಂಡಿಸಲು ಪ್ರಯತ್ನಿಸುತ್ತೇನೆ" ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮುಂದಿನ ಸೋಮವಾರ ಮಂಡಿಸಲಿರುವ ಬಜೆಟ್ ನಲ್ಲಿ ಯಾವುದಕ್ಕೂ ಕೊರತೆಯಾಗದಂತೆ ಉತ್ತಮ ಬಜೆಟ್ ಮಂಡಿಸುತ್ತೇನೆ ಎಂದರು.
ಇದೇ ವೇಳೆ ಕೋವಿಡ್ ಲಸಿಕೆ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರೇ ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಲಸಿಕೆ ತೆಗೆದುಕೊಳ್ಳಲು ಹಿಂಜರಿಕೆ ಮಾಡಬೇಡಿ , ನಾನು ಲಸಿಕೆ ಪಡೆದುಕೊಳ್ಳುತ್ತೇನೆ. 60 ವರ್ಷ ಮೇಲ್ಪಟ್ಟವರ ಸಹಿತ ಕೋವಿಡ್ ಲಸಿಕೆಯನ್ನು ಎಲ್ಲಾ ನಾಗರಿಕರು ತೆಗೆದುಕೊಳ್ಳಬೇಕು ಎಂದು ವಿನಂತಿಸಿದರು.